ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಹೋರಾತ್ರಿ ಚಳಿಯಲ್ಲಿ ರಸ್ತೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಸಿಐಟಿಯು ಸಂಘಟನೆಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ಮುಂದುವರೆದಿದೆ. ಬೇಡಿಕೆ ಈಡೇರಿಸುವವರೆಗೂ ಫ್ರೀಡಂ ಪಾರ್ಕ್ ನಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


