ಗುಬ್ಬಿ: ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ಮಸಿಯಮ್ಮನಹಟ್ಟಿ ಗ್ರಾಮದಲ್ಲಿ ಕಾಡಾಯೋಜನೆಯಡಿ 57 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕ್ರಮವಹಿಸಿದರೂ, ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕೊರೊನಾ ಮೂರನೇ ಅಲೆ ಹರಡುತ್ತಿದ್ದು ಜನತೆ ಸಾಕಷ್ಟು ಜಾಗೃತಿ ವಹಿಸಬೇಕು ಎಂದರು.
ವಿಕೇಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಸಹ ಜನತೆ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ಸಾಕಷ್ಟು ಸಾವು ಸಂಭವಿಸಿದೆ. ಜನತೆ ಈ ಬಾರಿಯೂ ಸಹ ನಿರ್ಲಕ್ಷ್ಯ ವಹಿಸಿದರೆ, ಮೊದಲಿಗಿಂತ ಹೆಚ್ಚು ಸಾವು ನೋವುಗಳು ಸಂಭಸಲಿದೆ. ಆದರಿಂದ ಜನತೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ವರದಿ: ಡಿ.ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy