ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯದ ರೈತ ಸಂಘಗಳು ಹಾಗೂ ಕನ್ನಡ ಪರ ಸಂಘಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಕೆ. ಆರ್. ಎಸ್. ನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಕಾವೇರಿ ಕೊಳ್ಳದ ರೈತರ ಬೆಳೆಗೆ ನೀರಿಲ್ಲ.
ಬೆಂಗಳೂರು ನಗರದಲ್ಲಿ 1 ಕೋಟಿ 30 ಲಕ್ಷ ಜನರು ಕುಡಿಯುವ ನೀರಿಗಾಗಿ ಕಾವೇರಿ ನದಿ ಮೇಲೆ ಅವಲಂಬಿತರಾಗಿದ್ದಾರೆ. ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮಾರಕವಾಗಿದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ತಿಳಿಸಿದ್ದಾರೆ.


