ತುರುವೇಕೆರೆ: ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಶಾಂತಿನಗರದ ಬಿ.ಎಂ.ಟಿ.ಸಿ. ಕಟ್ಟಡದಲ್ಲಿನ ಟಿ.ಟಿ.ಎಂ.ಸಿ, ಎ.ಬ್ಲಾಕ್ ನ ಐದನೇ ಮಹಡಿಯ ಕೇಂದ್ರ ಕಚೇರಿಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ರವರು, ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ನೂರಾರು ಅಭಿಮಾನಿಗಳು, ಬೆಂಬಲಿಗರು, ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳ ಆಗಮನ. ಶಾಸಕರಿಗೆ ಶುಭಾಶಯ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಮಸಾಲ ಜಯರಾಮ್, ಗೌರವಯುತ ಸ್ಥಾನವನ್ನು ನೀಡಿದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಪಕ್ಷದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿ ವತಿಯಿಂದ ನೂತನ ಅಧ್ಯಕ್ಷರಿಗೆ ಇದೇ ವೇಳೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ವರದಿ: ಸಚಿನ್ ಮಾಯಸಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy