ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಜನ ವಿರೋಧಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರಿಗೆ ಮಾತನಾಡಿದ ಅವರು, 15,000 ಲಂಚ ಕೊಟ್ಟವರಿಗೆ ವಸತಿ ಇಲಾಖೆ ವತಿಯಿಂದ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಎಲ್ಲ ಇಲಾಖೆಯಲ್ಲಿಯೂ ಅತ್ಯಂತ ಭ್ರಷ್ಟಾಚಾರ ನಡೆಯುತ್ತಿದೆ ಎಂದರು.
ಕಾಮಗಾರಿ ನಡೆಸಲು ಗ್ರಾಂಟ್ ಮಂಜೂರು ಮಾಡಿಸಲು ಕೂಡ ಲಂಚ ನೀಡಬೇಕಾಗುತ್ತಿದೆ. ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಮಾಡಿಸಿಕೊಳ್ಳಲು ಕೂಡ ಲಂಚ ನೀಡಬೇಕಾಗುತ್ತದೆ ದಂಧೆ ನಡೆಯುತ್ತಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಈ ಭ್ರಷ್ಟ ಸರ್ಕಾರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲದಂತಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW