ಕೊರಟಗೆರೆ: ಐತಿಹಾಸಿಕ ಕಮನಿಯ ಕ್ಷೇತ್ರ ಎಂದೇ ಪ್ರಸಿದ್ಧವಾಗಿರುವ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.
ಫೆ.16 ರ ಶುಕ್ರವಾರ ನಡೆಯುವ ಜಾತ್ರೆಗೆ ಮುಜರಾಯಿ ಇಲಾಖೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹಾಗೂ ತಾ.ಪಂ. ಇಒ ಅಪೂರ್ವ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತಿಹಾಸ ಪ್ರಸಿದ್ಧವುಳ್ಳ ಕ್ಯಾಮೇನಹಳ್ಳಿಯ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರವಹಿಸಿ ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚನೆ ನೀಡಿದರು.
ದೇವಸ್ಥಾನದ ಬಳಿ ಹಲವು ಸಿದ್ಧತೆಗಳ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ಅಪೂರ್ವ, ಗ್ರಾಮ ಪಂಚಾಯಿತಿ ಪಿಡಿಒ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಭಕ್ತಾದಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


