‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 10 ಸಾವಿರ ಮಕ್ಕಳಿಗೆ 1. 5 ಲಕ್ಷ ನೋಟ್ ಬುಕ್ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ದೇಶ, ಭಾಷೆ ಮತ್ತು ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಮಕ್ಕಳು.
‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ‘ರಾಷ್ಟ್ರಭಕ್ತಿ, ದೇಶಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು. ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ‘ಶಿಕ್ಷಣಕ್ಕೆ ಪ್ರೋತ್ಸಾಹ, ಸಹಕಾರ ನೀಡುವುದು ಮುಖ್ಯ. ಈ ನಿಟ್ಟಿನಲ್ಲಿ ರಕ್ಷಾ ಫೌಂಡೇಷನ್ ದಿಟ್ಟ ಹೆಜ್ಜೆ ಇಟ್ಟಿದೆ’ ಎಂದರು.
ಶಾಸಕ ಬಿ. ವೈ. ವಿಜಯೇಂದ್ರ ಮಾತನಾಡಿ, ‘ನೊಂದವರ ಮತ್ತು ಬಡವರ ಸೇವೆ ಮಾಡುವುದು ಮುಖ್ಯ’ ಎಂದರು.
ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್ ಮಾತನಾಡಿ, ‘ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು’ ಎಂದು ಹೇಳಿದರು.
ರಕ್ಷಾ ಫೌಂಡೇಷನ್ ಸಂಸ್ಥಾಪಕ, ಶಾಸಕ ಸಿ. ಕೆ. ರಾಮಮೂರ್ತಿ ಮಾತನಾಡಿ, ‘ಶ್ರೀಮಂತ ಕುಟುಂಬದ ಮಕ್ಕಳಿಗೆ ಸಿಗುವ ಶಿಕ್ಷಣ ಸೌಲಭ್ಯ ಬಡ ಮಕ್ಕಳಿಗೆ ಸಿಗಬೇಕು’ ಎಂದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯನಿರ್ವಾಹಕ ತಿಪ್ಪೇಸ್ವಾಮಿ, ಸತೀಶ್ ರೆಡ್ಡಿ, ಮಾಜಿ ಮೇಯರ್ ಎಸ್. ಕೆ. ನಟರಾಜ್, ಪಾಲಿಕೆ ಮಾಜಿ ಸದಸ್ಯರಾದ ಸೋಮಶೇಖರ್, ನಾಗರತ್ನ ರಾಮಮೂರ್ತಿ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


