ವಿಜಯಪುರ: ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ ಖಜಾನೆ ಖಾಲಿಯಾಗಿದೆ. ಬ್ರಿಟಿಷ್ ಮಾದರಿಯಲ್ಲಿ ಉಪ್ಪಿನ ಮೇಲೆ ಕರ ವಿಧಿಸಿದಂತೆ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ನೀಡುತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ವಕ್ಫ್ ಆಸ್ತಿ ಕುರಿತು ಪ್ರಸ್ತಾಪಿಸಿದ ಯತ್ನಾಳ್, ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಫ್ ಆಸ್ತಿ ಇದೆ. ಇದನ್ನು ಬಡವರಿಗೆ ಹಂಚಿಕೆ ಮಾಡಿ. ಇವೆಲ್ಲವನ್ನು ಮಾಜಿ ಪ್ರಧಾನಿ ದಿ.ನೆಹರೂ ಮಾಡಿದ್ದಾರೆ. ವಕ್ಫ್ ನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗೊಲ್ಲ. ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು. ಅಲ್ಲಿ ನ್ಯಾಯವಾದಿಯೂ ಮುಸ್ಲಿಂ ಇರುತ್ತಾನೆ. ಎಲ್ಲರೂ ಅವರೇ ಅಲ್ಲಿ ನಮಗೆ ನ್ಯಾಯ ಸಿಗೊಲ್ಲ. ನಮಗೆ ನೆಹರು ಮಾಡೆಲ್ ಬೇಡ, ನಮಗೆ ಮೋದಿ ಯೋಜನೆ ಬೇಕು ಎಂದರು.
ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಹೈಕೋರ್ಟ್‌ಗೆ ಹೋಗುತ್ತೇನೆ. ದೇಶದ 12 ಲಕ್ಷ ಎಕರೆ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು. ಬಡವರಿಗೆ ಮನೆ ನಿರ್ಮಾಣ ಮಾಡಲು ಬಳಕೆಯಾಗಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


