ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರಾಗಿದ್ದಾರೆ.
ಪತಿ ಪ್ರಕಾಶ್ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದರೆ, ಪ್ರಕಾಶ್ ಪತ್ನಿ ಯಶೋಧ ಫ್ಲೋರ್ ಮಿಲ್ ನಡೆಸುತ್ತಿದ್ದರು. ಈವರೆಗೂ ಪತಿ ಹಾಗೂ ಪತ್ನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296