ಬೆಂಗಳೂರು: ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರ ಗೆಳತಿ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಿಂದ ದೊಡ್ಡ ಆಘಾತ ಎದುರಾಗಿದೆ. ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ 59ನೇ ಸಿಸಿಎಚ್ (CCH) ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತಾ ಎಂ. ಸಂಬ್ರಾಣಿ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ವಿಚಾರಣೆ ವೇಳೆ ಪವಿತ್ರಾ ಗೌಡ ಪರ ಹಿರಿಯ ವಕೀಲ ಬಾಲನ್ ಹಾಗೂ ವಕೀಲ ನಾರಾಯಣಸ್ವಾಮಿ ವಾದ ಮಂಡಿಸಿ, ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಈಗಾಗಲೇ ಮುಗಿದಿರುವುದನ್ನು ಗಮನಕ್ಕೆ ತಂದರು. ಅಲ್ಲದೆ, ಪವಿತ್ರಾ ಗೌಡ ಅವರು ಸಿಂಗಲ್ ಮದರ್ (ಏಕಾಂಗಿ ತಾಯಿ) ಆಗಿದ್ದು, ಅವರ ಮಗಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯವನ್ನು ಪರಿಗಣಿಸಿ ಮಾನವೀಯ ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಕೋರ್ಟ್ನಲ್ಲಿ ಮನವಿ ಮಾಡಿದ್ದರು.
ಆದರೆ, ವಕೀಲರ ಈ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ಅಧಿಕೃತವಾಗಿ ವಜಾಗೊಳಿಸಿದೆ. ಇದರೊಂದಿಗೆ ಅವರ ಜೈಲುವಾಸ ಮುಂದುವರಿಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
