nammatumakuru

    Subscribe to Updates

    Get the latest creative news from FooBar about art, design and business.

    What's Hot

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026
    Facebook Twitter Instagram
    ಟ್ರೆಂಡಿಂಗ್
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು:  ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದ ತಂದೆಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
    ತುಮಕೂರು March 3, 2023

    ತುಮಕೂರು:  ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದ ತಂದೆಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

    By adminMarch 3, 2023Updated:March 4, 2023No Comments2 Mins Read
    tumakuru news

    ತುಮಕೂರು: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ, ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಎಫ್ ಟಿ ಎಸ್ ಸಿ 1 ಜಿಲ್ಲಾ ಸತ್ರ ನ್ಯಾಯಾಲಯ  (ವಿಶೇಷ ಮಕ್ಕಳ ಸ್ನೇಹಿ ನ್ಯಾಯಾಲಯ) ತೀರ್ಪು ನೀಡಿದೆ.

    ಸಿರಾ ತಾಲೂಕಿನ ಕಸಬಾ ಹೋಬಳಿ, ಮುದಿಗೆರೆ ಗ್ರಾಮದಲ್ಲಿ 22—02—2022ರಂದು ರಾತ್ರಿ 10 ಗಂಟೆಗೆ ತಂದೆ ಬಸವರಾಜು ಮಲಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಎಬ್ಬಿಸಿ ಬೆದರಿಸಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಸಾಯಿಸಿ ಬಿಡುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ.

    ತಂದೆಯ ದುಷ್ಕೃತ್ಯವನ್ನು ಬಾಲಕಿ ತನ್ನ ಚಿಕ್ಕಮ್ಮನಿಗೆ ತಿಳಿಸಿದ್ದು, ಈ ವೇಳೆ ಆಕೆಯ ಚಿಕ್ಕಮ್ಮ ಜಾಗೃತಗೊಂಡು, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಶಿರಾದಲ್ಲಿ ಸಹಾಯಕ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಧಿಕಾರಿಗಳ ತಕ್ಷಣವೇ ತಂದೆ ಬಸವರಾಜು ವಿರುದ್ಧ ದೂರು ನೀಡಿದ್ದಾರೆ. ಅಂತೆಯೇ ಆರೋಪಿಯ ವಿರುದ್ಧ ಕಲಂ 04,  ಪೋಕ್ಸೋ ಐಪಿಸಿ 504, 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಪ್ರಕರಣ ಸಂಬಂಧ ತನಿಖೆ ನಡೆಸಿದ ಶಿರಾ ಪೊಲೀಸ್ ಇನ್ಸ್ ಪೆಕ್ಟರ್ ಪಿ.ಬಿ. ಹನುಮಂತಪ್ಪ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದರು.

    ಈ ಪ್ರಕರಣದ ವಿಚಾರಣೆ ನಡೆಸಿದ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿ ವಿಚಾರಣೆಯಿಂದ ಹಾಜರು ಪಡಿಸಿದ ದಾಖಲೆಗಳಿಂದ ಆರೋಪಿತನ ವಿರುದ್ಧ ಕಲಂ 506 ಐಪಿಸಿ ಹಾಗೂ  ಪೋಕ್ಸೋ ಆಕ್ಟ್ 2012ರ ಅಡಿಯಲ್ಲಿ ಅಪರಾಧವು  ರುಜುವಾತುಗೊಂಡಿರುತ್ತದೆ ಎಂದು ತೀರ್ಮಾನಿಸಿ ಘನ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸಂಧ್ಯಾ ರಾವ್ ಪಿ. ಅವರು ಆರೋಪಿ ಬಸವ ರಾಜುಗೆ ಜೀವಿತಾವಧಿ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿದ್ದು, ನೊಂದ ಬಾಲಕಿಗೆ 10 ಲಕ್ಷ ಪರಿಹಾರ ಘೋಷಿಸಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.

    ವರದಿ: ಶಿವಕುಮಾರ್, ಮೇಷ್ಟ್ರು ಮನೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    ಕಡಿಮೆ ಬಜೆಟ್‌ ನಲ್ಲಿ ಹೊಸ ಬೈಕ್ ಖರೀದಿಸಲು ಬಯಸುವವರಿಗೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿವೆ. ವಿಶೇಷವಾಗಿ 100 ಸಿಸಿ ಮತ್ತು 110…

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.