ತುಮಕೂರು: ಪೊಕ್ಸೋ ಪ್ರಕರಣದ ಆರೋಪಿಗೆ ತುಮಕೂರು ಎಸ್.ಟಿ.ಎಸ್.ಸಿ. –1 ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ರಘು ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 01 ಲಕ್ಷ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
2022ರ ಏಪ್ರಿಲ್ 3ರಂದು ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ರು. ನಂತರ ಪೊಲೀಸ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಎಂ.ಬಿ. ಮಹಿಳಾ ಪೊಲೀಸ್ ಠಾಣೆರವರು ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿಯಾದ ರಘು ಎಂಬಾತನನ್ನು ಬಂಧಿಸಿದ್ರು. ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣವನ್ನು ಸ್ಪೆಷಲ್ ಸಿ.ಸಿ ನಂ: 328/2022 ರಲ್ಲಿ ಮಾನ್ಯ ತುಮಕೂರು ಎಸ್.ಟಿ.ಎಸ್.ಸಿ -1 ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿಯ ವಿರುದ್ಧ ಆರೋಪವು ಸಾಬೀತಾದ ನಂತರ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕರು ಆಶಾ ಕೆ.ಎಸ್. ರವರು ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————