ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರ ನಿರ್ಧರಿಸಿದೆ.
ಕೋವಿಡ್ 1 ಮತ್ತು 2ನೇ ಅಲೆಯ ಪರಿಣಾಮ ಜನಜೀವನ, ಆರ್ಥಿಕ ವ್ಯವಸ್ಥೆ ಕುಸಿದು ಹೋಗಿ ಜನರು ಸಂಕಷ್ಟ ಎದುರಿಸಿದ್ದಾರೆ. ಲಾಕ್‍ಡೌನ್ ಸೇರಿದಂತೆ ನಾನಾ ರೀತಿಯ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಕೋರೊನಾ ಮೂರನೆ ಅಲೆಯಿಂದ ಹೆಚ್ಚಿನ ಹಾನಿಯಾಗಲಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‍ನ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿವೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೋವಿಡ್ ರೂಪಾಂತರದ ಸೋಂಕುಗಳು ಕಾಣಿಸಿಕೊಂಡಿವೆ. ಹೀಗಾಗಿ ನಾಲ್ಕನೇ ಅಲೆ ಎದುರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ ಸರ್ಕಾರಗಳ ಜೊತೆ ಏ.27ರಂದು ವರ್ಚುವಲ್ ಮಾದರಿಯಲ್ಲಿ ಸಭೆ ನಡೆಸಲಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ಜಾಗೃತಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಧಾನಿಯವರು ಇದೇ 27ರಂದು ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಲಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy