ಪಶ್ಚಿಮ ಬಂಗಾಳ: ಕೋವಿಡ್ ಅಲೆ ಮುಗಿದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ಬಂಗಾಳದಲ್ಲಿ ಹೇಳಿಕೆ ನೀಡಿದ್ದಾರೆ.
ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಪೌರತ್ವ ಕಾನೂನು ಕೇಂದ್ರದ ಕಾರ್ಯಸೂಚಿಯಲ್ಲಿ ಮರಳಲಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೊಸ ಪೌರತ್ವ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು.
ನಾನು ಇಂದು ಉತ್ತರ ಬಂಗಾಳಕ್ಕೆ ಬಂದಿದ್ದೇನೆ. ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ, ಕೋವಿಡ್ ಅಲೆ ಕಡಿಮೆಯಾದ ತಕ್ಷಣ ನಾವು ಈ ನೆಲದ ಮೇಲೆ ಸಿಎಎ ಅನ್ನು ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5