ಭಾರತದಲ್ಲಿ ಹೊಸದಾಗಿ 2,86,384 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 4,03,71,500ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8 ಗಂಟೆಗೆ ತಾಜಾ ಅಂಕಿ-ಅಂಶ ನೀಡಿದೆ.
ನಿನ್ನೆ ಒಂದು ದಿನದಲ್ಲಿ 573 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಕೋವಿಡ್-19 ಮರಣಗಳ ಸಂಖ್ಯೆ 4,91,700ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಗ್ಗಿದೆ ಮತ್ತು ಸಮಗ್ರ ಸೋಂಕಿನ ಶೇ.5.46ರಷ್ಟಿದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.33ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ.
ಕಳೆದ 24 ಗಂಟೆಗಳಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 20,546ರಷ್ಟು ಕಡಿಮೆಯಾಗಿವೆ ಎಂದು ಸಚಿವಾಲಯ ಮಾಹಿತಿ ಕೊಟ್ಟಿದೆ.
ವರದಿ :ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy