ಬೆಂಗಳೂರು: ಕೊವಿಡ್ 19 ನಡುವೆಯೇ ಸರ್ಕಾರದ ತೀವ್ರ ವಿರೋಧದ ನಡುವೆಯೇ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದೆ. ನಿನ್ನೆ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಮೇಕೆದಾಟು ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ.
ಮೇಕೆದಾಟು ಸಂದರ್ಭದಲ್ಲಿಯೇ ಇದೀಗ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಧಿಕಾರಿಗಳು ಹೇಳಿದ್ದು, ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.
ಎಡಿಸಿ ಜವರೇಗೌಡ, ಡಿಹೆಚ್ ಒ ನಿರಂಜನ್ , ಡಿ.ಕೆ.ಶಿವಕುಮಾರ್ ಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸಲಹೆ ನೀಡಿದ್ದು, ಆದರೆ, ಡಿಕೆಶಿ ಕ್ಲಾಸ್ ತೆಗೆದುಕೊಂಡಿದ್ದಾರೆ. “ಐ ಆ್ಯಮ್ ಫಿಟ್ ಆ್ಯಂಡ್ ಫೈನ್” ನನಗೇ ಸಲಹೆ ಕೊಡಲು ಬಂದಿದ್ದೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಾನೊಬ್ಬ ಜನಪ್ರತಿನಿಧಿ ನನಗೇ ಬ್ಲ್ಯಾಕ್ಮೇಲ್ ಮಾಡ್ತಿದ್ದೀರಾ? ನೀವು ನಿಮ್ಮ ಆರೋಗ್ಯ ಇಲಾಖೆ ಸಚಿವರಿಗೆ ಹೋಗಿ ಹೇಳಿ. ಬಚ್ಚಾಗಳ ಹತ್ತಿರ ಆಟ ಆಡಲು ಹೋಗಿ ಹೇಳಿ ಅಂತ ಡಿಕೆಶಿ ಹೇಳಿದ್ದಾರೆ.
ನನಗೆ ಏನಾಗಿದೆ ಎಂದು ಟೆಸ್ಟ್ ಮಾಡಲು ಬಂದಿದ್ದೀರಾ. ಅಧಿಕಾರಿಗಳಿಗೆ ನಿಮ್ಮ ಹುದ್ದೆ ಯಾವುದು ಎಂದು ಪ್ರಶ್ನಿಸಿದ ಅವರು, ನಾನು ಟೆಸ್ಟ್ ಮಾಡಿಸಿಕೊಳ್ಳಲ್ಲ ಅಂತ ವಾಪಸ್ ಕಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy