ಚೆನ್ನೈ: ತಮಿಳುನಾಡು ಸರ್ಕಾರವು ತಮ್ಮ ರಾಜ್ಯದಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟವರ ಕುಟುಂಬದವರಿಗೆ 50 ಸಾವಿರ ರೂಪಾಯಿಗಳ ಪರಿಹಾರವನ್ನ ಘೋಷಣೆ ಮಾಡಿದೆ. ಈ ಕುರಿತು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಡಿಸೆಂಬರ್ 3ರಂದೇ ಆದೇಶ ಹೊರಡಿಸಿದೆ. ಪರಿಹಾರ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕೋವಿಡ್ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಸಂದರ್ಭ ಹಾಗೂ ಕೋವಿಡ್ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದವರೂ ಸೇರಿದಂತೆ ಕೋವಿಡ್ ನಿಂದ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ 2021ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗೆ ಅನುಗುಣವಾಗಿಯೇ ಪರಿಹಾರ ವಿತರಣೆ ನಡೆಯಲಿದೆ. ದೇಶದಲ್ಲಿ ಮೊದಲ ಕೋವಿಡ್ ಪ್ರಕರಣ ವರದಿಯಾದ ದಿನದಿಂದ ಅನ್ವಯವಾಗುವಂತೆ ಪರಿಹಾರ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವರದಿ: ಆಂಟೋನಿ ಬೇಗೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700