ತುಮಕೂರು: ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ ಗಣಿಬಾಧಿತ ಗ್ರಾಮದ ಫಲಾನುಭವಿಗಳಿಗೆ ಒಂದು ಮಿಶ್ರತಳಿ ಹಾಲು ಕರೆಯುವ ಹಸು/ಎಮ್ಮೆ ಸಾಕಾಣಿಕೆಗಾಗಿ 60,000 ರೂ.ಗಳ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಗಣಿಬಾಧಿತ/ಪ್ರಭಾವಕ್ಕೊಳಗಾದ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ 5 ಕಿಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಫಲಾನುಭವಿಗಳು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಹರಿಗೆ ಬ್ಯಾಂಕಿನ ಮೂಲಕ ಘಟಕ ವೆಚ್ಚ 60,000 ರೂ.ಗಳ ಸಹಾಯಧನವನ್ನು ನೀಡಲಾಗುವುದು.
ಘಟಕ ವೆಚ್ಚದ ಪೈಕಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.90ರಂತೆ ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.50ರಂತೆ ನೀಡಲಾಗುವುದು. ಉಳಿದ ಮೊತ್ತವನ್ನು ಫಲಾನುಭವಿಯು ವಂತಿಗೆ ರೂಪದಲ್ಲಿ ಅಥವಾ ಬ್ಯಾಂಕಿನಿಂದ ಸಾಲದ ರೂಪದಲ್ಲಿ ಪಾವತಿ ಮಾಡಬೇಕಾಗಿರುತ್ತದೆ.
ನಿಯಮಾನುಸಾರ ಅಂಗವಿಕಲರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಬಂಧಪಟ್ಟ ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಬರುವ ಪಶುವೈದ್ಯ ಸಂಸ್ಥೆಯವರನ್ನು ಸಂಪರ್ಕಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ನವೆಂಬರ್ 19ರೊಳಗಾಗಿ ಸಲ್ಲಿಸಬಹುದಾಗಿದ್ದು, ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಕುಟುಂಬ ಪಡಿತರ ಚೀಟಿಯ ಪ್ರತಿ, ಜಾತಿ ಪ್ರಮಾಣ ಪತ್ರ(ಪ ರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಲ್ಪಸಂಖ್ಯಾತರಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯಿಂದ ನೀಡಿದ ವಾಸಸ್ಥಳದ ದೃಢೀಕರಣ ಪತ್ರ ಬ್ಯಾಂಕ್ ಉಳಿತಾಯ ಖಾತೆಯ ಪಾಸ್ ಪುಸ್ತಕದ ದೃಢೀಕೃತ ಪ್ರತಿ, ವಿಕಲಚೇತನರಾಗಿದ್ದಲ್ಲಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಬೇಕು. ಅರ್ಜಿದಾರರು ಕಡ್ಡಾಯವಾಗಿ ಗಣಿಬಾಧಿತ ಪ್ರಭಾವಕ್ಕೊಳಗಾದ 5 ಕಿಮೀ. ವ್ಯಾಪ್ತಿಯಲ್ಲಿರುವ ಗ್ರಾಮದವರಾಗಿರಬೇಕು ಹಾಗೂ ಈ RUITS ತಂತ್ರಾಂಶದಲ್ಲಿ ನೋಂದಾಯಿಸಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC