nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 22, 2026

    ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ

    May 22, 2026
    Facebook Twitter Instagram
    ಟ್ರೆಂಡಿಂಗ್
    • ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
    • ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
    • ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
    • ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
    • ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
    • ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
    ಕೊರಟಗೆರೆ May 22, 2026

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    By adminMay 22, 2026No Comments2 Mins Read

    ಕೊರಟಗೆರೆ: ಎಲೆರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಗೊಲ್ಲಹಳ್ಳಿ ಮಜರೆ ಹನುಮನಾಯಕನ ಪಾಳ್ಯದಲ್ಲಿ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ನೀರಿಲ್ಲದೆ ಹಸು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯದ ಕುಟುಂಬಗಳು ವಾಸಿಸುವ ಈ ಗ್ರಾಮದಲ್ಲಿ ಸುಮಾರು 8 ರಿಂದ 10 ಮನೆಗಳಿಗೆ ಕಳೆದ ಹತ್ತು ದಿನಗಳಿಂದ ನೀರು ಸರಬರಾಜು ಆಗಿಲ್ಲ. ನೀರಿಗಾಗಿ ಮಹಿಳೆಯರು ಹಾಗೂ ಮಕ್ಕಳು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾನವ ಜೀವದ ಜೊತೆ ಜಾನುವಾರುಗಳ ಬದುಕೂ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಹನುಮನಾಯಕನ ಪಾಳ್ಯದ ನರಸಿಂಹಮೂರ್ತಿ ಅವರ ಮನೆಯಲ್ಲಿ ಸಾಕಿದ್ದ ಹಸು ಹಲವು ದಿನಗಳಿಂದ ನೀರಿನ ಕೊರತೆಯಿಂದ ಬಳಲುತ್ತಿತ್ತು ಎನ್ನಲಾಗಿದ್ದು, ಕೊನೆಗೆ ಅಸ್ವಸ್ಥಗೊಂಡ ಹಸು ಪ್ರತಿನಿತ್ಯ ಮೂರ್ನಾಲ್ಕು ಬಾರಿ ನೀರಿನಿಂದ ಮೈ ತೊಳೆಯುತ್ತಿದ್ದೆವು. ಇತ್ತೀಚಿನ ನೀರಿನ ಸಮಸ್ಯೆಯಿಂದ ಕುಡಿಯಲು ನೀರಿಲ್ಲದೆ ಹಾಗೂ ಇನ್ನಿತರ ಸಮಸ್ಯೆಯಾಗಿ ಸಾವನ್ನಪ್ಪಿದೆ ಎಂದು ಮಾಲೀಕ ಹಾಗೂ ಮನೆಯವರು ಗ್ರಾಮ ಪಂಚಾಯಿತಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

    ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಲವು ಬಾರಿ ಎಲೆರಾಮಪುರ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಟ್ಯಾಂಕರ್ ಮೂಲಕವಾದರೂ ನೀರು ಒದಗಿಸಬೇಕಿತ್ತು. ಆದರೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

    ಗ್ರಾಮದ ಗಂಗಮ್ಮ ನರಸಿಂಹಯ್ಯ ಮಾತನಾಡಿ, ಕುಡಿಯಲು ಹಾಗೂ ದಿನಬಳಕೆಗೆ ನೀರಿಲ್ಲದೆ ಬಹಳಷ್ಟು ಸಮಸ್ಯೆ ಅನುಭವಿಸುತ್ತಿದ್ದೇವೆ, ಜಾನುವಾರುಗಳಿಗೆ ನೀರಿಲ್ಲ. ಮಕ್ಕಳು ಸಹ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಬಂದಿದೆ. ಹತ್ತು ದಿನಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ ಹೇಳುತ್ತಿದ್ದೇವೆ. ಆದರೆ ಯಾರೂ ಗಮನ ಕೊಟ್ಟಿಲ್ಲ ಎಂದು ಅಳಲು ತೋಡಿಕೊಂಡರು.

    ನೀರಿನ ಸಮಸ್ಯೆ ವಿರುದ್ಧ ಸಾರ್ವಜನಿಕರು ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾದರೆ ಜನರು ಬದುಕುವುದು ಹೇಗೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

    ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಸಮಸ್ಯೆ ತಿಳಿಗೊಳಿಸಬೇಕಾದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಳೆದ ಹತ್ತು ದಿನಗಳಿಂದ ಈ ಗ್ರಾಮದ ಕಡೆ ತಲೆ ಹಾಕಿಲ್ಲ. ನೀರಿನ ಸಮಸ್ಯೆಯಿಂದ ಜಾನುವಾರು ಸಾವು ಸಂಭವಿಸಿದೆ. ತಕ್ಷಣ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಹಸು ಸಾವಿಗೆ ಪರಿಹಾರ ನೀಡಬೇಕು.

    — ಗ್ರಾಮಸ್ಥರು, ಹನುಮನಾಯಕನ ಪಾಳ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    ಬೆಳಕವಾಡಿ: ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಸಾಕು ನಾಯಿಯ ಮೇಲೆ ದಾಳಿ ನಡೆಸಿ,…

    ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 22, 2026

    ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ

    May 22, 2026

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.