ಚೆನ್ನೈ: ಗೋಮೂತ್ರದಲ್ಲಿನ ಔಷಧೀಯ ಗುಣವಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಕೊಂಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜನವರಿ 15ರಂದು ಮಾತು ಪೊಂಗಲ್ ಪ್ರಯುಕ್ತ ಗೋ ಸಂರಕ್ಷಣಾ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವಾಗ, ಸನ್ಯಾಸಿಯೊಬ್ಬರು ತೀವ್ರ ಜ್ವರವಿದ್ದಾಗ ಗೋಮೂತ್ರ ಸೇವಿಸಿ ಹೇಗೆ ಚೇತರಿಸಿಕೊಂಡರು ಎಂಬ ಉದಾಹರಣೆ ನೀಡುವಾಗ ಕಾಮಕೋಟಿ ಅವರು ಈ ಹೇಳಿಕೆ ನೀಡಿದ್ದಾರೆ.
ಗೋಮೂತ್ರವು ಬ್ಯಾಕ್ಟೀರಿಯಾ ನಿರೋಧಕ, ಶಿಲೀಂಧ್ರಯ ನಿರೋಧಕ ಹಾಗೂ ಜೀರ್ಣಕಾರಕ ಗುಣಗಳನ್ನು ಹೊಂದಿದೆ. ಹೊಟ್ಟೆ ಉರಿ ಸಮಸ್ಯೆಯಂತಹ ಆರೋಗ್ಯ ಸಮಸ್ಯೆಗಳಿಗೆ ಗೋಮೂತ್ರ ಸೂಕ್ತ. ಅಲ್ಲದೇ ಗೋಮೂತ್ರದ ಔಷಧೀಯ ಗುಣಗಳನ್ನು ಪರಿಗಣಿಸಬೇಕು ಎಂದು ಅವರು ಹೇಳಿಕೆ ನೀಡಿದ್ದಾರೆ.
ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್ ಸಂಸದ ಪಿ.ಕಾರ್ತಿ ಚಿದಂಬರಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಸ್ಕರಣೆ ಮಾಡದ, ತಾಜಾ ಗೋ ಮೂತ್ರದಲ್ಲಿ ವಿಷಕಾರಿ ಬ್ಯಾಕ್ಟೀರಿಯಾಗಳು ಇರುತ್ತವೆ. ಹೀಗಾಗಿ, ಗೋ ಮೂತ್ರದ ನೇರ ಸೇವನೆ ಮಾನವನ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ ಗೋಮೂತ್ರದ ಕುರಿತು ವರದಿ ಪ್ರಕಟಿಸಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx