ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲ ಪ್ರತಿಭಟನೆ ನಡೆಸಿದರು.
ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ‘ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿವೆ. ರಾಜಕೀಯವಾಗಿ ಪ್ರಬಲವಾಗಿರುವ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯಗಳು ಪರಸ್ಪರ ವೈರಿಗಳಂತೆ ಗಲಭೆ, ಕೊಲೆ, ಸುಲಿಗೆ, ಅತ್ಯಾಚಾರ ಹಿಂಸೆಗಳಲ್ಲಿ ತೊಡಗಿಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ದಶಕಗಳ ಕಾಲ ಮಾಡಿರುವ ಕೋಮು ಪ್ರಚೋದನೆಯಿಂದಲೇ ಈ ಎರಡು ಸಮುದಾಯಗಳ ನಡುವೆ ದ್ವೇಷ ಬೆಳೆದಿದೆ’ ಎಂದು ಆರೋಪಿಸಿದರು.
‘ಗಲಭೆಯನ್ನು ನಿಯಂತ್ರಿಸಲು ವಿಫಲವಾಗಿರುವ ಮಣಿಪುರದ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಜನರ ಬಳಿ ಇರುವ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಬೇಕು. ಅಕ್ರಮವಾಗಿ ಅರಣ್ಯದಲ್ಲಿ ಬೆಳೆಯುತ್ತಿರುವ ಗಸಗಸೆ (ಮಾದಕ ವಸ್ತು) ಕೃಷಿಯನ್ನು ನಿಯಂತ್ರಿಸಬೇಕು. ಅಕ್ರಮ ವಲಸೆ ತಡೆಯಲು ಕ್ರಮ ಕೈಗೊಳ್ಳಬೇಕು. ಮಣಿಪುರ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಿ, ಜನತೆಗೆ ಅಗತ್ಯ ವಸ್ತುಗಳು ಮತ್ತು ಔಷಧ ಸರಬರಾಜು ಮಾಡಬೇಕು. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು. ಎನ್ ಎಫ್ ಐಡಬ್ಲ್ಯು ನಾಯಕಿಯರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


