ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ.
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದರು.
ಪುರಸಭಾ ಅಧ್ಯಕ್ಷ ಪಿ.ಎಚ್. ರಾಜೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ ಬಗೆ ಮತ್ತು ಸದ್ಯ ಹಿಂದುಳಿದ ವರ್ಗಗಳ ಏಳಿಗೆಗೆ ಸಂವಿಧಾನ ಯಾವ ರೀತಿ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಗಿದ್ದು, 20ಕ್ಕೂ ಅಧಿಕ ರೈತ ರೈತರಿಗೆ ಪಹಣಿಯನ್ನು ವಿತರಿಸಲಾಗಿದೆ.
ಕಾರ್ಯಕ್ರಮದಲ್ಲಿ ತಾಪಂ ಇಓ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸಮಾಜ ಸೇವಕ ಬತ್ತಿನೇನಿ ನಾಗೇಂದ್ರ ರಾವ್, ಸದಸ್ಯರುಗಳಾದ ರವಿ, ಇಮ್ರಾನ್, ಶ್ರೀನಿವಾಸ್ ಬಾಬು, ಗಂಗಾಧರ್, ರಾಮಲಿಂಗ, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್, ನಗರ ವೃತ್ತ ನಿರೀಕ್ಷಕರಾದ ಸುರೇಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರು ಜಿ. ನರಸಿಂಹ ರೆಡ್ಡಿ, ಕಿಸಾನ್ ಸಂಘದ ಅಧ್ಯಕ್ಷರಾದ ಕೃಷ್ಣರಾವ್, ಬಿಆರ್ಸಿ ವೆಂಕಟೇಶ್, ಟಿಪಿಓ ವಿಜಯಕುಮಾರ್ ಆರ್.ಐ.ರಾಜಗೋಪಾಲ್, ನಾರಾಯಣ ಗೌಡ ಗ್ರಾಮ ಆಡಳಿತ ಅಧಿಕಾರಿ ರಾಜೇಶ್ ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx