ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶೀಘ್ರದಲ್ಲೇ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಜೊತೆಗೆ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ವಿದಾಯ ಹೇಳಲು ಭಜ್ಜಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಭಜ್ಜಿ ಕ್ರಿಕೆಟ್ ನಿಂದ ನಿವೃತ್ತಿಯಾದ ನಂತರ ಐಪಿಎಲ್ ನಲ್ಲಿ ಪ್ರಮುಖ ತಂಡದ ಬೌಲಿಂಗ್ ಕೋಚ್ ಅಥವಾ ಮೆಂಟರ್ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಬಳಿಕ ಹರ್ಭಜನ್ ಸಿಂಗ್ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರಂತೆ. ಮೂಲಗಳ ಪ್ರಕಾರ , ಭಜ್ಜಿ ಈ ಐಪಿಎಲ್ ನಿಂದಲೇ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ. ಹರ್ಭಜನ್ ಸಿಂಗ್ ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗಳು ಭಾರಿ ಆಫರ್ ನೀಡಿವೆಯಂತೆ. ಮೆಗಾ ಹರಾಜು ಪ್ರಕ್ರಿಯೆ ಮುಗಿದ ಬಳಿಕ ಭಜ್ಜಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಇನ್ನು ಭಾರತದಲ್ಲಿ ಆಯೋಜಿಸಿದ್ದ 2021 ರ ಐಪಿಎಲ್ ಸೀಸನ್‌ನ ಮೊದಲ ಲೆಗ್‌ನಲ್ಲಿ ಭಜ್ಜಿ ಕೊನೆಯದಾಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. 41ರ ಹರೆಯದ ಭಜ್ಜಿ 1998ರಲ್ಲಿ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಭಜ್ಜಿ ಟೀಂ ಇಂಡಿಯಾ ಪರ 103 ಟೆಸ್ಟ್‌ಗಳಲ್ಲಿ 417 ವಿಕೆಟ್‌ಗಳು, 236 ODIಗಳಲ್ಲಿ 269 ವಿಕೆಟ್‌ಗಳು ಮತ್ತು 28 T20 ಗಳಲ್ಲಿ 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಒಟ್ಟಾರೆ 711 ಅಂತರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ.
ವರದಿ: ಆಂಟೋನಿ ಬೇಗೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700