ತಿಪಟೂರು: ತಾಲ್ಲೂಕಿನ ಅಯ್ಯನಬಾವಿ ಆಟದ ಮೈದಾನದಲ್ಲಿ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅಯ್ಯನಬಾವಿ ರಾಯಲ್ ಕ್ರಿಕೆಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿ,ಗ್ರಾಮೀಣ ಭಾಗಗಳಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ನಡೆಯುತ್ತಿರುವುದು ತುಂಬ ಸಂತೋಷದ ಸುದ್ದಿ. ಇಂತಹ ಗ್ರಾಮೀಣ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು. ಬಳಿಕ ಬ್ಯಾಟು ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ಗ್ರಾಮದ ಹಿರಿಯ ಮುಖಂಡ ಕೃಷ್ಣಪ್ಪ, ಸಮಾಜ ಸೇವಕ ಬೋಜೇಗೌಡ ಮತ್ತು ಪ್ರಥಮ ದರ್ಜೆ ಅರಣ್ಯ ಗುತ್ತಿಗೆದಾರ ಬಿ.ಆರ್.ಶಶಿಧರ್ ಮಾತನಾಡಿದರು.
ಮತ್ತೀಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ತೇಜಾವತಿ ಶ್ರೀನಿವಾಸ್, ಸದಸ್ಯ ತಿಮ್ಮರಾಜು, ಮಾಜಿ ಸದಸ್ಯರಾದ ಮೂರ್ತಿ, ನಾಗರಾಜ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ.ಕುಮಾರ್, ಮುಖಂಡರಾದ ಗಂಗಾಧರಯ್ಯ ಮತ್ತು ಸತೀಶ್ ಸೇರಿದಂತೆ ಸಂಘಟನೆ ರಾಯಲ್ ಕ್ರಿಕೆಟರ್ಸ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz