ಮುಂಬೈ: ನಟಿ ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದು ನಾನು ಯಾವಾಗ ಹೇಳಿದ್ದೆ ಎಂದು ಪ್ರಶ್ನಿಸಿ ಯುವ ಕ್ರಿಕೆಟಿಗ ಶುಭ್ ಮನ್ ಗಿಲ್ ಗರಂ ಆಗಿದ್ದಾರೆ.
ಶುಭ್ ಮನ್ ಗಿಲ್ ರಶ್ಮಿಕಾ ನನ್ನ ಕ್ರಶ್ ಎಂದು ಹೇಳಿಕೆ ನೀಡಿದ್ದರು ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಯಾವಾಗ ಹೇಳಿದ್ದೆ ಆಕ್ರೋಶ ವ್ಯಕ್ತಪಡಿಸಿದ ಪ್ರಶ್ನಿಸಿದ್ದಾರೆ.
ಎಲ್ಲಿಯೂ ನಾನು ಇದರ ಬಗ್ಗೆ ಮಾತಾಡಿಲ್ಲ ಅಂತ ಯೋಚನೆ ಮಾಡ್ತಿರುವ ಎಮೋಜಿ ಹಾಕಿ ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಯಾವತ್ತೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


