nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    ರಾಜ್ಯ ಸುದ್ದಿ February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    By adminFebruary 3, 2026No Comments2 Mins Read
    g parameshwar

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಅಂಕಿ–ಅಂಶಗಳ ಸಹಿತ ಸ್ಪಷ್ಟಪಡಿಸಿದರು.

    ಹಿಂದಿನ ಸರ್ಕಾರಗಳ ಅವಧಿಯ ಅಪರಾಧಗಳ ವಿವರ: ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ ಪರಮೇಶ್ವರ್, ಅವರ ಅವಧಿಯಲ್ಲಿ ನಡೆದ ಅಪರಾಧಗಳ ಪಟ್ಟಿಯನ್ನು ನೀಡಿದರು:


    Provided by
    Provided by

    ಆರ್. ಅಶೋಕ (2011-2013): 4,121 ಕೊಲೆಗಳು, 582 ಮಾದಕ ದ್ರವ್ಯ ಪ್ರಕರಣಗಳು ಹಾಗೂ 995 ಸೈಬರ್ ಅಪರಾಧಗಳು ದಾಖಲಾಗಿದ್ದವು.

    ಬಸವರಾಜ ಬೊಮ್ಮಾಯಿ (2019-2020): 2,554 ಕೊಲೆಗಳು, 8,317 ಮಾದಕ ದ್ರವ್ಯ ಪ್ರಕರಣಗಳು ಮತ್ತು 19,157 ಸೈಬರ್ ಅಪರಾಧ ಪ್ರಕರಣಗಳು ನಡೆದಿದ್ದವು.

    ಆರಗ ಜ್ಞಾನೇಂದ್ರ: ಇವರ ಅವಧಿಯಲ್ಲಿ 2,417 ಕೊಲೆಗಳು ಹಾಗೂ 24,486 ಸೈಬರ್ ಅಪರಾಧಗಳು ದಾಖಲಾಗಿದ್ದವು.

    “ನಾನು ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಕೊಲೆ ಪ್ರಕರಣಗಳ ಸಂಖ್ಯೆ 1,322 ಕ್ಕೆ ಇಳಿದಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳು ಹೆಚ್ಚುತ್ತಿಲ್ಲ ಎಂಬುದಕ್ಕೆ ಸಾಕ್ಷಿ” ಎಂದು ಅವರು ಹೇಳಿದರು.

    ಮಾದಕ ದ್ರವ್ಯದ ವಿರುದ್ಧ ಸಮರ: ಮಾದಕ ವಸ್ತುಗಳ ವಿರುದ್ಧ ಸರ್ಕಾರ ರಾಜಿ ಇಲ್ಲದ ಹೋರಾಟ ನಡೆಸುತ್ತಿದೆ ಎಂದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ವಶಪಡಿಸಿಕೊಂಡ ಗಾಂಜಾದ ಮೌಲ್ಯವನ್ನು ವಿವರಿಸಿದರು:

    • 2023: 133 ಕೋಟಿ ರೂ. ಮೌಲ್ಯದ 10,630 ಕೆಜಿ.
    • 2024: 264 ಕೋಟಿ ರೂ. ಮೌಲ್ಯದ 6,136 ಕೆಜಿ.
    • 2025: 308 ಕೋಟಿ ರೂ. ಮೌಲ್ಯದ 6,219 ಕೆಜಿ.

    ಅಕ್ರಮ ವಲಸಿಗರ ಗಡೀಪಾರು: ಅಕ್ರಮ ಬಾಂಗ್ಲಾದೇಶಿಗಳ ನುಸುಳುವಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಗಡಿಗಳನ್ನು ಕಾಪಾಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು. ಆದರೂ ನಮ್ಮ ಸರ್ಕಾರ ಅಕ್ರಮ ವಲಸಿಗರನ್ನು ಗುರುತಿಸಿ ಗಡೀಪಾರು ಮಾಡುವಲ್ಲಿ ಯಶಸ್ವಿಯಾಗಿದೆ” ಎಂದರು. 2021 ರಲ್ಲಿ 15 ಹಾಗೂ 2022 ರಲ್ಲಿ 21 ಜನರನ್ನು ಗಡೀಪಾರು ಮಾಡಲಾಗಿತ್ತು.

    ಕಾಂಗ್ರೆಸ್ ಅವಧಿಯಲ್ಲಿ ಈ ಸಂಖ್ಯೆ ಏರಿಕೆಯಾಗಿದ್ದು, 2024 ರಲ್ಲಿ 68 ಮತ್ತು 2025 ರಲ್ಲಿ 87 ಜನರನ್ನು ಗಡೀಪಾರು ಮಾಡಲಾಗಿದೆ.

    ಇಲ್ಲಿಯವರೆಗೆ ಒಟ್ಟು 196 ಜನರನ್ನು ಗಡೀಪಾರು ಮಾಡಲಾಗಿದ್ದು, ಇನ್ನೂ 370 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬೆಂಗಳೂರಿನಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಅಭಿಯಾನವನ್ನು ತೀವ್ರಗೊಳಿಸುವುದಾಗಿ ಸಚಿವರು ಸದನಕ್ಕೆ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.