ತುಮಕೂರು: ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಸೋಡಿಯಂ ಬಾಂಬ್ ಸ್ಫೋಟಿಸಿದ ಆರೋಪದಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ರೈತರ ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಆ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದರು.
ಏನಿದು ಪ್ರಕರಣ?
ಡ್ರೋನ್ ಪ್ರತಾಪ್ ಅವರು ತಮ್ಮ ಸ್ನೇಹಿತರೊಂದಿಗೆ ಸೇರಿ ರೈತರ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ್ದಾರೆ. ಈ ಸಂಬಂಧ ಯೂಟ್ಯೂಬ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧಾರವಾಗಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಪ್ರತಾಪ್ ಮತ್ತು ಇತರ ಇಬ್ಬರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಪ್ರತಾಪ್ ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆ ಸೆಕ್ಷನ್ 176, ಸಿಆರ್‌ಪಿಸಿ 158 ಎ ಮತ್ತು ಬಿ ಹಾಗೂ ಸ್ಪೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx