ಲಕ್ನೋ: ವ್ಯಕ್ತಿಯೊಬ್ಬ ಹೊಸ ವರ್ಷದಂದೇ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಹತ್ಯೆ ಮಾಡಿರುವ ಘಟನೆ ಲಕ್ನೋದ ಹೊಟೇಲ್ ವೊಂದರಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಗ್ರಾ ಮೂಲದ ಅರ್ಷದ್ (24) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಮೃತರನ್ನು ಅರ್ಷದ್ನ ಸಹೋದರಿಯರಾದ ಅಲಿಯಾ (9), ಅಲ್ಶಿಯಾ (19), ಅಕ್ಸಾ (16) ಮತ್ತು ರಹಮೀನ್ (18) ಎಂದು ಗುರುತಿಸಲಾಗಿದೆ. ಆರೋಪಿಯ ತಾಯಿ ಅಸ್ಮಾ ಎಂದು ಪೊಲೀಸರು ತಿಳಿಸಿದ್ದಾರೆ.
ಲಖನೌನ ನಾಕಾ ಪ್ರದೇಶದ ಹೋಟೆಲ್ ಶರಣಜಿತ್ ನಲ್ಲಿ ಈ ಘಟನೆ ನಡೆದಿದೆ. ಸದ್ಯದ ಮಾಹಿತಿಗಳ ಪ್ರಕಾರ ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ. ಪೊಲೀಸರು ಘಟನೆ ಸಂಬಂಧ ವಿವರವಾಗಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಫೋರೆನ್ಸಿಕ್ ತಂಡಗಳನ್ನು ಅಪರಾಧ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಡಿಸಿಪಿ ತ್ಯಾಗಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx