ಕೊಯಮತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ರೈಲಿನಿಂದ ಕೆಳಗೆ ತಳ್ಳಿರುವ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಕೊಯಮತ್ತೂರಿನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಇಂಟರ್ ಸಿಟಿ ರೈಲಿನಲ್ಲಿ ಮಹಿಳಾ ಬೋಗಿಯಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಲ್ಲದ್ದೆ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುಪ್ಪೂರು ಜಿಲ್ಲೆಯ ಅವಿನಾಶಿಯ ಮಹಿಳೆ ಕೊಯಮತ್ತೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ರೈಲಿನಲ್ಲಿ ಈ ಘಟನೆ ಸಂಭವಿಸಿದೆ.
ಮಹಿಳೆ ಶೌಚಾಲಯಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ದುಷ್ಕರ್ಮಿ, ಆಕೆ ಸಹಾಯಕ್ಕಾಗಿ ಕಿರುಚಾಡಿದ ವೇಳೆ ಯಾವುದೇ ಕರುಣೆ ತೋರಿಸದೆ ಆಕೆಯನ್ನು ರೈಲಿನಿಂದ ಕ್ರೂರವಾಗಿ ಕೆಳಗೆ ತಳ್ಳಿದ್ದಾರೆ. ಸಹಾಯಕ್ಕಾಗಿ ಮಹಿಳೆಯ ಕೂಗು ಕೇಳಿ ದಾರಿಹೋಕರು ಧಾವಿಸಿ ಬಂದು ಆಕೆಯನ್ನು ರಕ್ಷಿಸಿ ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ಧಾರೆ.
ಮಹಿಳೆಯ ಕೈ ಮತ್ತು ಕಾಲುಗಳಲ್ಲಿ ಮೂಳೆ ಮುರಿತಗಳಾಗಿದ್ದು, ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೆ.ವಿ. ಕುಪ್ಪಂ ಪ್ರದೇಶದ ಪೂಂಚೋಲೈ ಗ್ರಾಮದ ಹೇಮರಾಜ್ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx