ಬೆಂಗಳೂರು: ಕ್ರಿಸ್‍ಮಸ್ ಆಚರಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಸ್‍ಮಸ್ ಆಚರಣೆಗೆ ಅನುಮತಿ ನೀಡಲಾಗಿದೆ. ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಚರ್ಚ್‍ಗಳ ಬಳಿ ಜನಸಂದಣಿ ಹೆಚ್ಚಾದಂತೆ ನೋಡಿಕೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾರ್ಥನೆ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳು ಆಧ್ಯತೆ ನೀಡಬೇಕು. ಎರಡು ಡೋಸ್ ಲಸಿಕೆ ಪಡೆದಿರಲೇಬೇಕು ಎಂಬ ನಿಯಮ ಜಾರಿಗೊಳಿಸಲಾಗಿದೆ.
ಕ್ರಿಸ್‍ಮಸ್ ಆಚರಣೆಗಾಗಿ ಯಾವುದೆ ಹೊಸ ಮಾರ್ಗಸೂಚಿ ಮಾಡಿಲ್ಲ. ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಹಬ್ಬ ಆಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಕೊರೊನಾ ತಪಾಸಣೆ ಹೆಚ್ಚಳ ಮಾಡಲಾಗಿದೆ. ಪ್ರತಿನಿತ್ಯ 40 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ. ಅವಶ್ಯಕತೆ ಬಿದ್ದರೆ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಕೊರೊನಾ ತಪಾಸಣೆ ಹೆಚ್ಚಳ ಮಾಡಲಾಗಿದೆ. ಪ್ರತಿನಿತ್ಯ 40 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ. ಅವಶ್ಯಕತೆ ಬಿದ್ದರೆ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದರು.
ವರದಿ: ಆಂಟೋನಿ ಬೇಗೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700