ಪಾವಗಡ: ಕಾಡುಪ್ರಾಣಿಗಳು ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ. ಆದ್ದರಿಂದ ಸರ್ಕಾರವು ತಕ್ಷಣ ರೈತರ ನೆರವಿಗೆ ಬಂದು ಬೆಳೆ ನಷ್ಟ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಪೂಜಾರಪ್ಪ ನೇತೃತ್ವದಲ್ಲಿ ಪ್ರತಿಭಟಿಸಿ ನಂತರ ತಾಲ್ಲೂಕು ಕಚೇರಿಯ ಗ್ರೇಟ್-2 ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರವ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಪೂಜಾರಪ್ಪ, ತಾಲ್ಲೂಕಿನ ಕಸಬಾ ಹೋಬಳಿಯ ಗುಂಡಾರ್ಸಹಳ್ಳಿ ಗ್ರಾಮದ ಸರ್ವೆ ನಂಬರಿನ 105ರಲ್ಲಿ ಒಟ್ಟು 5 ಎಕರೆ ಜಮೀನಿನಲ್ಲಿ ಶೇಂಗಾ ಬೆಳೆಯನ್ನು ಬೆಳೆಯಲಾಗಿದ್ದು ಇದರಲ್ಲಿ ಎಕರೆಗಿಂತ ಹೆಚ್ಚು ಜಮೀನಿನಲ್ಲಿ ಬೆಳೆದ ಶೇಂಗಾ ಬೆಳೆಯನ್ನು ಜಿಂಕೆ, ಕಾಡು ಹಂದಿ ಆಗ ನವಿಲುಗಳು ಪ್ರತಿದಿನ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇನ್ನು ಈ ಬಗ್ಗೆ ಕೃಷಿ, ಮತ್ತು ತೋಟಗಾರಿಕೆ ಅಧಿಕಾರಿಗಳಿಗೆ ತಿಳಿಸಿದರೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಷ್ಟವಾದರೆ ಕೆವಲ 10ರಿಂದ 15 ಸಾವಿರ ಪರಿಹಾರ ನೀಡುತ್ತಾರೆ. ಇದರಿಂದ ರೈತರಿಗೆ ಪ್ರಯೋಜನವಿಲ್ಲ ಹಾಗಾಗಿ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ರಾಮಾಂಜಿನಪ್ಪ, ನರಸಪ್ಪ, ಸದಾಶಿವಪ್ಪ, ಗುಡಿಪಲ್ಲಪ್ಪ, ಹನುಮಂತರಾಯಪ ತಿಮ್ಮಯ್ಯ, ಶಿವು, ರಾಜಪ್ಪ, ತಿಪ್ಪೇಸ ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296