ಪಾವಗಡ: ಬೆಳೆ ವಿಮೆ ಸಮೀಕ್ಷೆ, ಬೆಳೆ ವಿಮೆ ನೋಂದಣಿ ವಿಚಾರವಾಗಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯಕ ಕೃಷಿ ನಿರ್ದೇಶಕ ಬೀರೆದ್ರ ಬಾಬು ರೈತರಿಗೆ ತರಬೇತಿ ನೀಡಿದರು.
ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯತಿ ಆವರಣದಲ್ಲಿತರಬೇತಿ ನೀಡಿದ ಅವರು, ರೈತರಿಗೆ ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ ಅಂತಿಮ ದಿನಾಂಕಗಳ ಬಗ್ಗೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮ ಮಾಡಿ ರೈತರ ತಮ್ಮ ಮೊಬೈಲ್ ಮುಖಾಂತರ ತಮ್ಮ ಜಮೀನಿನಲ್ಲಿರುವ ಬೆಳೆಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡುವುದರ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೈತರಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ತರಬೇತಿಯನ್ನು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಆರುದಂತಿ ಗ್ರಾಮ ಪಂಚಾಯತಿ ಅಧ್ಯಕ್ಷ ದೊಡ್ಡಣ್ಣ, ಗ್ರಾ ಪಂ ಸದಸ್ಯ ವೆಂಕಟೇಶ್ , ಗಿರೀಶ್ ಕುಮಾರ್, ರಾಮಕೃಷ್ಣಪ್ಪ, ಅಂಜಿನಪ್ಪ ನಿವೃತ್ತ ಶಿಕ್ಷಕರು ಉದ್ದಂಡ್ಡಪ್ಪನಪಾಳ್ಯ, ರವಿ, ಮಮತಾ ಕೊತ್ತೂರು, ಈರಣ್ಣ, ಹನುಮಂತರಾಯಪ್ಪ ಕೆ, ಗೀತಮ್ಮ ಸಿ.ಎಸ್.ಹಟ್ಟಿ, ರತ್ನಮ್ಮ ದವಡಬೆಟ್ಟ ಇದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA