nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    ತುಮಕೂರು July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    By adminJuly 24, 2026No Comments2 Mins Read
    g parameshwar.jpg

    ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಈಗಾಗಲೇ 1 ಕೋಟಿಯನ್ನು ಪ್ರತಿಯೊಬ್ಬ ಶಾಸಕರಿಗೂ ನೀಡಲು ತೀರ್ಮಾನಿಸಿದ್ದೇವೆ. ಅಲ್ಲದೇ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ಹಣವನ್ನು ನೀಡಿದ್ದೇವೆ. ಈಗಾಗಲೇ ಪಿಡಿ ಖಾತೆಗಳಲ್ಲಿ 329 ಕೋಟಿ ಲಭ್ಯವಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

    “ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಡಲೇ ಜನರಿಗೆ ಉದ್ಯೋಗ ನೀಡುವಂತೆ ಸೂಚಿಸಿದ್ದೇನೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಶೀಘ್ರವೇ ಕಾಮಗಾರಿಗಳನ್ನು ಆರಂಭಿಸುವಂತೆ ತಿಳಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ನಾವು ಪತ್ರ ಬರೆದಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ ತಿಂಗಳಲ್ಲಿ ಅವರು ಮನವಿಯನ್ನು ನಿರೀಕ್ಷಿಸುತ್ತಾರೆ. ಆವಾಗ ನಾವು ಮನವಿ ಸಲ್ಲಿಸಿದರೆ ಹಣವನ್ನು ಬಿಡುಗಡೆ ಮಾಡುತ್ತಾರೆ.”

    — ಡಾ. ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿಗಳು

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನೆ ಬಾಕಿ ಇದೆ. ಬೆಂಗಳೂರು ವಿಭಾಗದಲ್ಲಿ ಜುಲೈ 25ರಂದು ನಾನು ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸುತ್ತೇವೆ. ಅದಾಗಿ ಮೈಸೂರಿನಲ್ಲಿ ಮಾಡುತ್ತೇವೆ. ಆಗ ನಮಗೆ ರಾಜ್ಯ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಚಿತ್ರಣ ಸಿಗುತ್ತದೆ. ಆ ಬಳಿಕ ಚರ್ಚಿಸಿ, ರೈತರಿಗೆ, ಸಾಮಾನ್ಯ ಜನರಿಗೆ ಸಮಸ್ಯೆಯಾಗದಂತೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.

    ನೀವು ಭೇಟಿ ಕೊಟ್ಟ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಮುಂಗಾರಿನಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ರೈತರು ಬೀಜ ಬಿತ್ತನೆ ಮಾಡಿದ್ದಾರೆ. ಆಮೇಲೆ ಮಳೆಯಾಗಿಲ್ಲ, ಬಿತ್ತನೆ ಮಾಡಿದ್ದೆಲ್ಲ ಒಣಗಿ ಹೋಗಿದೆ. ಈಗ ಮತ್ತೆ ಆಗಸ್ಟ್ ತಿಂಗಳಲ್ಲಿ ಮಳೆಯಾದರೆ ಬೀಜ ಬಿತ್ತನೆ ಮಾಡುತ್ತಾರೆ. ಅದೊಂದು ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಮಾಡಲು ಅವಕಾಶ ಕೇಳಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು. ಮೊದಲ ಪರೀಕ್ಷೆಯಲ್ಲಿ ಕೆಲವರು ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದರೂ ಎರಡನೇ ಬಾರಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿದೆ. ಲಕ್ಷಾಂತರ ಮಕ್ಕಳಿಗೆ ತೊಂದರೆಯಾಗಿದೆ. ಅಧಿಕಾರದಲ್ಲಿರುವವರು ಇದರ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮೋದಿಯವರು ತನಿಖೆ ಮಾಡಿಸುತ್ತೇವೆ ಎಂದು ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿದ್ದೇನೆ ಎಂದು ಮೋದಿಯವರು ಹೇಳಿದ್ದಾರೆ. ಹಾಗಿದ್ದಮೇಲೆ ಧಮೇಂದ್ರ ಪ್ರಧಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ. ಜವಾಬ್ದಾರಿ ಹೊತ್ತವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
    ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಮೇಲೆ ದುರ್ವರ್ತನೆ ತೋರಿದ್ದಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ

    September 7, 2026

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಪಾವಗಡ: ವಿಶ್ವದಾದ್ಯಂತ ಭಕ್ತಿಭಾವದಿಂದ ಆಚರಿಸಲ್ಪಡುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು…

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.