nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಯಾಬಿನೆಟ್ ನಿರ್ಧಾರದ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಿ.ಟಿ. ರವಿ ಮನವಿ
    ರಾಜ್ಯ ಸುದ್ದಿ November 24, 2023

    ಕ್ಯಾಬಿನೆಟ್ ನಿರ್ಧಾರದ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಿ.ಟಿ. ರವಿ ಮನವಿ

    By adminNovember 24, 2023No Comments2 Mins Read
    c t ravi

    ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸಚಿವಸಂಪುಟ ಹಿಂದಕ್ಕೆ ಪಡೆದಿದೆ. ಇದು ಸಂವಿಧಾನ ವಿರೋಧಿ ಕ್ರಮ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ. ರವಿ ಅವರು ಮನವಿ ಮಾಡಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಬ್ಲ್ಯಾಕ್‍ಮೇಲ್ ಪಾಲಿಟಿಕ್ಸ್ ನಡೆದಿದೆ. ಅದರ ಅಂಗವಾಗಿ ಇಡೀ ಸಂಪುಟ, ಜನ ಏನೆಂದುಕೊಳ್ಳುವರೋ ಎಂಬುದನ್ನು ಯೋಚಿಸದೆ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ ಎಂದು ಆರೋಪಿಸಿದರು.


    Provided by
    Provided by

    ಇಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಶ್ನೆ ಬರುವುದಿಲ್ಲ. ತನಿಖೆ ರದ್ದು ಎಂದರೆ ನ್ಯಾಯಾಂಗ ವ್ಯವಸ್ಥೆ ತಿರಸ್ಕರಿಸಿದಂತೆ ಎಂದ ಅವರು, ಇದು ಆಲಿಬಾಬಾ ಔರ್ ಚಾಲೀಸ್ ಚೋರ್ ಎಂಬಂತಿದೆ. ಒಬ್ಬ ಭ್ರಷ್ಟ ಆರೋಪಿಯ ಸಮರ್ಥನೆಗೆ ಇಡೀ ಕ್ಯಾಬಿನೆಟ್ ನಿಂತದ್ದು ಕರ್ನಾಟಕದ ಘನತೆಗೆ ಕಪ್ಪು ಚುಕ್ಕಿ ಇಟ್ಟಂತೆ. ಇದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಟ್ಟ ಜನರು ಮಾಡುವ ಕೆಲಸ ಅಲ್ಲ ಎಂದು ವಿಶ್ಲೇಷಿಸಿದರು.

    ಮುಖ್ಯಮಂತ್ರಿ, ಚೀಫ್ ಸೆಕ್ರೆಟರಿ ಯಾರ ಮನವಿ ಮೇರೆಗೆ ಈ ವಿಷಯ ಕೈಗೆತ್ತಿಕೊಂಡಿದ್ದಾರೆ? ಇಲ್ಲಿ ಸಂವಿಧಾನ ಇದೆ. ರಾಕ್ಷಸ ನ್ಯಾಯ ಇಲ್ಲ ಎಂದು ಮನವರಿಕೆ ಮಾಡಿಕೊಳ್ಳಬೇಕಿತ್ತು. ನಮ್ಮ ಮುಖಂಡರ ಮೇಲೆ ಆರೋಪ ಬಂದಾಗ ಅವರು ನ್ಯಾಯಾಲಯದ ಮೂಲಕ ನ್ಯಾಯ ಪಡೆದರು. ಕೇಸು ಹಿಂಪಡೆಯುವ ಭಂಡತನ ಮಾಡಿಲ್ಲ. ಇದು ಆರೋಪಗಳನ್ನು ಸಾಕ್ಷೀಕರಿಸಿದಂತೆ. ನ್ಯಾಯಾಲಯದ ಮೇಲೆ ವಿಶ್ವಾಸ ಇಲ್ಲ ಎಂದು ದೃಢಪಡಿಸಿದ್ದೀರಿ. ಸರಕಾರವು ಸಂಪುಟವನ್ನು ದುರುಪಯೋಗಪಡಿಸಿದೆ ಎಂದು ಟೀಕಿಸಿದರು.

    ಇವತ್ತಿನ ಡಿಸಿಎಂ 2017ರಲ್ಲಿ ರಾಜ್ಯದಲ್ಲಿ ಸಚಿವರಾಗಿದ್ದರು. ಪ್ರಾಮಾಣಿಕರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಗುತ್ತದೆಯೇ? ಆದರೆ, ಅಕ್ರಮ ಸಂಪತ್ತು ಪತ್ತೆಯಾಯಿತು. 2019ರಲ್ಲಿ ಯಡಿಯೂರಪ್ಪ ಅವರು ಇದನ್ನು ಸಿಬಿಐ ತನಿಖೆಗೆ ವಹಿಸಿದ್ದರು. ಆದಾಯದ ಮೂಲ ಇಲ್ಲದೇ 200 ಕೋಟಿಗೂ ಹೆಚ್ಚು ಸಂಪತ್ತು ಪತ್ತೆಯಾಗಿದೆ ಎಂದು ಇಡಿ ತಿಳಿಸಿತ್ತು ಎಂದು ವಿವರಿಸಿದರು.
    ‘ಆಲೂ ಡಾಲ್‍ನ, ದೂಸ್ರೆ ತರಫ್‍ಸೆ ಸೋನಾ..’ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆ ಮಾಹಿತಿಯನ್ನು ಸಿಬಿಐ ಕೇಳಿದರೆ ಹೇಳಬಹುದೆಂದು ಯೋಚಿಸಿ ಅದನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಪ್ರಾಥಮಿಕ ವರದಿಯನ್ನೂ ಕೊಟ್ಟಿದೆ. ಪ್ರಕರಣ ರದ್ದು ಮಾಡುವ ಅವರ ಕೇಳಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. 3 ತಿಂಗಳಲ್ಲಿ ಸಿಬಿಐ ಅಂತಿಮ ವರದಿ ಕೊಡಬೇಕಿತ್ತು. ಜನವರಿಯಲ್ಲಿ ಅಂತಿಮ ವರದಿ ನಿರೀಕ್ಷೆ ಇರುವಾಗ ಈ ಸಂವಿಧಾನ ವಿರೋಧಿ ನಿರ್ಧಾರ ಮಾಡಿರುವುದಾಗಿ ಆಕ್ಷೇಪಿಸಿದರು.

    ಹಿಂದಿನ ಕಾಂಗ್ರೆಸ್ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಚುನಾವಣೆ ಅಕ್ರಮ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದಾಗ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಅಂಥ ಕೆಟ್ಟ ಪರಂಪರೆಗೆ ರಾಜ್ಯದ ಸಚಿವಸಂಪುಟ ಮುಂದಾಗಿದೆ. ಎಲ್ಲ ಭ್ರಷ್ಟರಿಗೂ ಮಾದರಿ ಆಗುವಂಥ ನಿರ್ಧಾರ ಇದು. ಲಲ್ಲೂ ಪ್ರಸಾದ್ ಮೀರಿಸಿದ ಕೆಲಸ ಇದೆಂದು ಟೀಕಿಸಿದರು.

    ಇದು ತಪ್ಪು ನಿರ್ಧಾರ. ತಲೆತಗ್ಗಿಸುವ ನಿರ್ಣಯ. ಕಾನೂನು ಪದವೀಧರನಲ್ಲದ ನಾನು ಕೂಡ ಈ ಶಿಫಾರಸನ್ನು ಸಂಪುಟದಲ್ಲಿಡುತ್ತಿರಲಿಲ್ಲ. ನಿಮಗೆ ನಾಚಿಕೆ ಆಗುವುದಿಲ್ಲವೇ? ಇದು ಭಂಡತನದ ಪರಮಾವಧಿ ಎಂದು ಆಕ್ಷೇಪಿಸಿದರು.

    ಸಂವಿಧಾನ ಬಾಹಿರವಾಗಿ ನಡೆದಾಗ ರಾಜ್ಯಪಾಲರು ಮೂಕಪ್ರೇಕ್ಷಕರಾಗಿ ಕುಳಿತಿರಬಾರದು. ನಾವು ಯಾವ ಪದ್ಧತಿಯನ್ನು ರಾಜ್ಯದಲ್ಲಿ ಹುಟ್ಟು ಹಾಕುತ್ತಿದ್ದೇವೆ? ಸಮರ್ಥಿಸಲಾಗದ, ಉತ್ತರಿಸಲಾಗದ ಕ್ರಮ ಇದು ಎಂದು ತಿಳಿಸಿದರು. ಸಿಎಂ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕ್ರಮ ಇದು ಎಂದು ಟೀಕಿಸಿದರು.

    ಸಿಬಿಐ ತನಿಖೆ ವಿಚಾರದಲ್ಲಿ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದರು.

    ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಚಿದಾನಂದ ಗೌಡ, ಅ. ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.