ಹುಬ್ಬಳ್ಳಿ: ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ ಪೊಲೀಸರು ತನಿಖೆ ಮಾಡಬೇಕು ಎಂದರು.
ಹಳೆ ಹುಬ್ಬಳ್ಳಿ ಠಾಣೆ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx