ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಾರೋಗ್ಯದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬುಧವಾರ ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


