ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ. ಟಿ. ರವಿ ಅವರನ್ನು, ರಾಜ್ಯ ಕಾಂಗ್ರೆಸ್ “ವೈಫಲ್ಯಗಳ ಸರದಾರ” ಎಂದು ಕರೆದಿದೆ. ತವರು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ, ಬೇರೆ ಕ್ಷೇತ್ರವನ್ನು ಗೆಲ್ಲಿಸುವುದಿರಲಿ, ಸ್ವತಃ ತಾವೇ ಹೀನಾಯವಾಗಿ ಸೋತಿದ್ದಾರೆ.
ತಮಿಳುನಾಡಿನ ಉಸ್ತುವಾರಿಯಾಗಿ ಮಾಡಿದ ಸಾಧನೆ ಶೂನ್ಯ. ಇಂತಹ ಹಲವು “ವೈಫಲ್ಯಗಳ ಸರದಾರ” ಸಿ. ಟಿ ರವಿಯನ್ನು ಬಿಜೆಪಿಯ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಲಾಭವಾಗಲಿದೆ. ಅಕಸ್ಮಾತ್ ಬಿಜೆಪಿ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಪಕ್ಷ ಸಂತೋಷದಿಂದ ಸ್ವಾಗತಿಸುತ್ತದೆ ಎಂದು ಸಿ. ಟಿ. ರವಿ ಅವರ ಕಾಲನ್ನು ರಾಜ್ಯ ಕಾಂಗ್ರೆಸ್ ಘಟಕ ಎಳೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


