nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    ತುಮಕೂರು July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    By adminJuly 6, 2026No Comments2 Mins Read
    g parameshwar.jpg

    ತುಮಕೂರು: ಎಸ್ ಐಆರ್ (Special Intensive Revision) ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ರಾಜ್ಯದ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ, ಅವರ ಮನವಿ ಸ್ವೀಕರಿಸಿ ಹಲವು ಭರವಸೆಗಳನ್ನು ನೀಡಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಮೊದಲು ಭುವನಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದರು.
    ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಭುವನಾ ಅವರ ಸಾವಿಗೆ ಕಾರಣವಾದ ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಯಾವುದೇ ಹಂತದಲ್ಲಿ ಕರ್ತವ್ಯದ ಒತ್ತಡ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಶನಿವಾರ ಚಿತ್ರದುರ್ಗದಲ್ಲಿ ಪೂರ್ವನಿಗದಿತ ಪ್ರಗತಿ ಪರಿಶೀಲನಾ ಸಭೆ ಇದ್ದ ಕಾರಣ ಹಾಗೂ ಆರೋಗ್ಯ ಸಮಸ್ಯೆಯಿಂದ ತಕ್ಷಣ ತುಮಕೂರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಉಪಮುಖ್ಯ ಮಂತ್ರಿಯವರು ತಿಳಿಸಿದರು. ಆದರೆ ಅಪಘಾತದ ಸುದ್ದಿ ತಿಳಿದ ಕೂಡಲೇ ಗಾಯಾಳುವಿಗೆ ತುರ್ತು ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಹೇಳಿದರು. ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ವಿಷಾದ ವ್ಯಕ್ತಪಡಿಸಿದರು.

    “ತುಮಕೂರು ಜಿಲ್ಲೆಯಿಂದ ಕಂದಾಯ ಸಚಿವನಾಗಿರುವ ಎರಡನೇ ವ್ಯಕ್ತಿ ನಾನು. ನಾಲ್ಕು ದಶಕಗಳ ರಾಜಕೀಯ ಅನುಭವದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ತತ್ವದೊಂದಿಗೆ ಕೆಲಸ ಮಾಡಿದ್ದೇನೆ. ಸರ್ಕಾರಿ ನೌಕರರನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಹೇಳಿದರು.

    ಕಂದಾಯ ಇಲಾಖೆಯ ಬಡ್ತಿ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು, ಎಂಟು ವರ್ಷಗಳಿಂದ ಬಾಕಿ ಉಳಿದಿದ್ದ ತಹಶೀಲ್ದಾರ್ ಗ್ರೇಡ್-2 ರಿಂದ ಗ್ರೇಡ್-1ಕ್ಕೆ ಬಡ್ತಿಯನ್ನು ತಮ್ಮ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು. ಇದೇ ರೀತಿಯಲ್ಲಿ ಒಂದು ವಾರದೊಳಗೆ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ನಿರೀಕ್ಷಕ (ಆರ್ ಐ) ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯೂ ಆರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
    ಇದರ ಜೊತೆಗೆ ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ಪತಿ–ಪತ್ನಿ ವರ್ಗಾವಣೆ ಪ್ರಕ್ರಿಯೆಯನ್ನು ಪುನರಾರಂಭಿಸಿರುವುದಾಗಿ ತಿಳಿಸಿದ ಅವರು, ಇಲಾಖೆಯ ವೃಂದ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಎಸ್ ಐಆರ್ ಕಾರ್ಯಕ್ಕೆ ನೀಡಲಾಗಿದ್ದ ಕಡಿಮೆ ಅವಧಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಈ ಕಾರ್ಯ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಕಾಶ ನೀಡಬಹುದಾಗಿತ್ತು. ಆದರೆ ಕೇವಲ ಒಂದು ತಿಂಗಳ ಗಡುವು ನೀಡಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ತೀವ್ರ ಒತ್ತಡದಲ್ಲಿ ಕೆಲಸ ಮಾಡಬೇಕಾಯಿತು” ಎಂದು ಅಭಿಪ್ರಾಯಪಟ್ಟರು.
    ಮೃತ ಭುವನಾ ಅವರ ಕುಟುಂಬಕ್ಕೆ ಚುನಾವಣಾ ಆಯೋಗದಿಂದ ₹30 ಲಕ್ಷ ಪರಿಹಾರ, 15 ದಿನಗಳೊಳಗೆ ವಿಮೆ ಮೊತ್ತ ಹಾಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ಸೇರಿದಂತೆ ಸರ್ಕಾರದಿಂದ ದೊರೆಯುವ ಎಲ್ಲ ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

    “ನಾವು ಮತ್ತು ನೀವು ಬೇರೆ ಬೇರೆ ಅಲ್ಲ; ಎಲ್ಲರೂ ಸೇರಿದ್ದೇ ಸರ್ಕಾರ. ಸರ್ಕಾರಿ ನೌಕರರು ಸಮಸ್ಯೆ ಇಟ್ಟುಕೊಂಡು ಕೆಲಸ ಮಾಡುವುದು ಸಾಧ್ಯವಿಲ್ಲ. ನಿಮ್ಮ ಎಲ್ಲ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸುತ್ತೇವೆ. ಸದಾ ನಿಮ್ಮೊಂದಿಗೆ ಇರುತ್ತೇನೆ. ಯಾವುದೇ ವಿಷಯಕ್ಕೆ ಮುಕ್ತವಾಗಿ ನನ್ನನ್ನು ಭೇಟಿ ಮಾಡಬಹುದು” ಎಂದು ಸಚಿವರು ಹೇಳಿದರು.

    ಸಚಿವರ ಭರವಸೆಯ ನಂತರ ಪ್ರತಿಭಟನಾ ನಿರತ ಸರ್ಕಾರಿ ನೌಕರರು ತಮ್ಮ ಹೋರಾಟವನ್ನು ಹಿಂಪಡೆಯುವ ನಿರ್ಧಾರ ಕೈಗೊಂಡರು. ಸರ್ಕಾರ ನೀಡಿದ ಭರವಸೆಗಳು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂಬ ನಿರೀಕ್ಷೆಯನ್ನು ನೌಕರರು ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.