ಗ್ಯಾರಂಟಿಗಳ ಅನುಷ್ಠಾನ ಬಗೆಗಿನ ಬದ್ಧತೆ ರಾಜ್ಯಪಾಲರು ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತೆ. ಇದನ್ನು ರಾಜ್ಯಪಾಲ ಗೆಹ್ಲೋಟ್ ಭಾಷಣದ ಮೂಲಕ ತಿಳಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಸರ್ಕಾರದ ಜನಪರವಾದ ಕಾಳಜಿ ಬಗ್ಗೆ ರಾಜ್ಯಪಾಲರು ಹೇಳಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂದೇಶ ನೀಡಿದ್ದೇವೆ ಎಂದರು.
ಮನಸ್ಸನ್ನು ಕೂಡಿಸುವ ಎಲ್ಲ ವರ್ಗಗಳಿಗೂ ಗೌರವಿಸುವಂಥ ಸಂದೇಶ ನೀಡಿದ್ದೇವೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಬೇಕಾದ ಕರ್ತವ್ಯ, ಆ ಹೆಜ್ಜೆಗಳ ಸೂಕ್ಷ್ಮ ಪರಿಚಯವನ್ನು ರಾಜ್ಯಪಾಲರು ಮಾಡಿದ್ದಾರೆ ಎಂದರು.
ಪ್ರವಾಸೋದ್ಯಮ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಕ್ಕೂ ಮಹತ್ವ ಕೊಟ್ಟಿದ್ದಾರೆ. ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುವಂತಹ ಕಾರ್ಯಕ್ರಮ ಕೊಡುವ ಭರವಸೆಯನ್ನು ನಾವು ನೀಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


