ಬೆಂಗಳೂರು: ಡೆಲಿವರಿ ಬಾಯ್ ಗ್ರಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದರ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಡೆಲಿವರಿ ಬಾಯ್ ನನ್ನು ಪ್ರಚೋದಿಸಿ ಗ್ರಾಹಕ ಏಟು ತಿಂದಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ.
ಬೆಂಗಳೂರಿನ ಬಸವೇಶ್ವರನಗರದಲ್ಲಿ ಈ ಘಟನೆ ನಡೆದಿದೆ. ಆ್ಯಪ್ವೊಂದರಲ್ಲಿ ಶಶಾಂಕ್ ಅವರ ಪತ್ನಿ ಕೆಲ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ಅವರ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಮನೆಯಿಂದ ಹೊರಕ್ಕೆ ಬಂದಿದ್ದರು. ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ವಿಷ್ಣುವರ್ಧನ್ ಮಹಿಳೆಯನ್ನು ಪ್ರಶ್ನಿಸಿದ್ದರು. ಈ ಘಟನೆ ಅಲ್ಲಿಗೆ ಮುಕ್ತಾಯವಾಗಿತ್ತು.
ಆದರೆ ಈ ವೇಳೆ ಶಶಾಂಕ್ ಡೆಲಿವರಿ ಬಾಯ್ ನನ್ನು ಅಡ್ಡಗಟ್ಟಿ ಕ್ಯಾತೆ ತೆಗೆದಿದ್ದು, ಈ ವೇಳೆ ಆಕ್ರೋಶಗೊಂಡ ಡೆಲಿವರಿ ಬಾಯ್ ಹಲ್ಲೆ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಹಲ್ಲೆಯಿಂದ ಕಣ್ಣಿಗೆ ಗಾಯವಾಗಿದೆ ಎಂದು ಶಶಾಂಕ್ ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW