ನವದೆಹಲಿ: ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿದೆ.
ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ. ಆದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.


