ಬೀದರ: ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರಿಂದ ಬೀದರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಕಛೇರಿಯಲ್ಲಿ ಸೈಬರ್ ಅಪರಾಧದ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಶಿವಾನಂದ ಘಾಣಿಗೇರ, ಪಿ.ಐ. ಸೈಬರ್ ಅಪರಾಧ ಪೊಲೀಸ್ ಠಾಣೆ ಬೀದರ್ ಇವರು ತಮ್ಮ ಸಿಬ್ಬಂದಿ ಮಲ್ಲಿಕಾರ್ಜುನ ಪಾಟೀಲ್, ಹರಿಕಿಶನ್ ಠಾಕೂರ್ ರವರೊಂದಿಗೆ ಬೀದರ್ ದ ಸಾರ್ವಜನಿಕ ಶಿಕ್ಷಣ ಇಲಾಖೆ (ಡಿ.ಡಿ.ಪಿ.ಐ.) ಕಛೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳಿಗೆ ಒಳಗಾಗದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಮತ್ತು ಅಪರಾಧ ಸಂಭವಿಸಿದಲ್ಲಿ ತಕ್ಷಣ ಸೈಬರ್ ಅಪರಾಧ ಸಹಾಯವಾಣಿ 1930 ತಕ್ಷಣವೇ ಕರೆ ಮಾಡಿ ತಮ್ಮ ದೂರನ್ನು ದಾಖಲಿಸಿ ಸೈಬರ್ ವಂಚನೆಯಿಂದ ಪಾರಾಗಬಹುದು ಎಂಬ ಬಗ್ಗೆ ಅರಿವು ಮೂಡಿಸಿದರು.
ಕರ್ತವ್ಯದ ಸಮಯದಲ್ಲಿ ಒತ್ತಡದಲ್ಲಿದ್ದಾಗ ಸರಕಾರಿ ನೌಕರರು ಸೈಬರ್ ಅಪರಾಧಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಇರುವುದರಿಂದ ಅವರು ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಅರಿವು ಮುಡಿಸಿರುವ ಸೈಬರ್ ಅಪರಾಧ ಪೊಲೀಸ್ ಠಾಣೆ ಅಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx