ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ.
ನಿನ್ನೆಯಿಂದ ತುಂತುರು ಮಳೆ ಆರಂಭವಾಗಿದ್ದು, ಇನ್ನೂ ಮೂರು ದಿನ ಮುಂದುವರೆಯುವ ಮುನ್ಸೂಚನೆಗಳಿವೆ.
ಚಂಡಮಾರುತದ ಪರಿಣಾಮದಿಂದ ಆಗಾಗ್ಗೆ ತಂಪಾದ ಮೇಲೈ ಗಾಳಿ ಹಾಗೂ ತುಂತುರು ಮಳೆ ಬೀಳುವುದರಿಂದ ಹಗಲಿನಲ್ಲೂ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ವರದಿ ತಿಳಿಸಿದೆ.
ಚಂಡಮಾರುತವು ತಮಿಳುನಾಡಿನ ಕಡಲೂರು, ಪಾಂಡಿಚೇರಿ ಬಳಿ ಇದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣವಾಗಿ ವ್ಯಾಪಕ ಮಳೆಯಾಗಿದೆ. ಕರಾವಳಿಯ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿ. 2 ಮತ್ತು 3 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx