ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಪ್ರಕಾಶ ಬಾರಕೇರ (42) ಮೃತಪಟ್ಟವರಾಗಿದ್ದಾರೆ. ಈವರೆಗೆ ಅಯ್ಯಪ್ಪ ಮಾಲಾಧಾರಿಗಳಾದ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಮೃತಪಟ್ಟಿದ್ದರು.
25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಉಳಿದ 8 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx