nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    ತುಮಕೂರು March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    By adminMarch 14, 2026No Comments1 Min Read
    gas

    ತುಮಕೂರು: ನಗರದಲ್ಲಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ ಗಳ ಕೊರತೆ ಎದುರಾಗಿದ್ದು, ಇದರ ನೇರ ಪರಿಣಾಮ ಇಂದಿರಾ ಕ್ಯಾಂಟೀನ್‌ ಗಳ ಮೇಲೆ ಬೀರಿದೆ. ಅಡುಗೆಗೆ ಅಗತ್ಯವಾದ ಸಿಲಿಂಡರ್ ಲಭ್ಯವಿಲ್ಲದ ಕಾರಣ, ನಗರದ ಪ್ರಮುಖ ಇಂದಿರಾ ಕ್ಯಾಂಟೀನ್‌ ಸೇರಿದಂತೆ ವಿವಿಧ ಘಟಕಗಳು ಶುಕ್ರವಾರದಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿವೆ.

    ತುಮಕೂರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿರುವ ಮುಖ್ಯ ಇಂದಿರಾ ಕ್ಯಾಂಟೀನ್‌ ನಲ್ಲಿ ಆಹಾರ ತಯಾರಿಸಿ ನಗರದ ಉಳಿದ 6 ಉಪಕೇಂದ್ರಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ಕಳೆದ 3–4 ದಿನಗಳಿಂದ ಹೋಟೆಲ್‌ಗಳಿಗೆ ಪೂರೈಕೆಯಾಗುವ ವಾಣಿಜ್ಯ ಸಿಲಿಂಡರ್‌ ಗಳ ಅಭಾವ ಉಂಟಾಗಿದೆ. ಗುರುವಾರ ಇಡೀ ದಿನ ಸಿಬ್ಬಂದಿ ಸಿಲಿಂಡರ್‌ ಗಾಗಿ ಹುಡುಕಾಟ ನಡೆಸಿದರೂ ಸಿಗದೇ ಇದ್ದಾಗ, ಅನಿವಾರ್ಯವಾಗಿ ಕ್ಯಾಂಟೀನ್‌ ಗೆ ಬೀಗ ಹಾಕಲಾಗಿದೆ.


    Provided by
    Provided by

    ಕ್ಯಾಂಟೀನ್ ಮುಂಭಾಗದಲ್ಲಿ “ಗ್ಯಾಸ್ ಸಿಗದ ಕಾರಣ ಇಂದು ಇಂದಿರಾ ಕ್ಯಾಂಟೀನ್ ಮುಚ್ಚಲಾಗಿದೆ. ದಯವಿಟ್ಟು ಸಹಕರಿಸಿ” ಎಂಬ ನಾಮಫಲಕವನ್ನು ಅಳವಡಿಸಲಾಗಿದ್ದು, ಎಂದಿನಂತೆ ಕಡಿಮೆ ದರದಲ್ಲಿ ಊಟ–ತಿಂಡಿ ನಿರೀಕ್ಷಿಸಿ ಬಂದ ಸಾರ್ವಜನಿಕರು ಮತ್ತು ಕಾರ್ಮಿಕರು ನಿರಾಸೆಯಿಂದ ವಾಪಸ್ಸಾಗುತ್ತಿದ್ದಾರೆ.

    ಪಾಲಿಕೆ ಆಯುಕ್ತರ ಪ್ರತಿಕ್ರಿಯೆ:
    ಈ ಕುರಿತು ಪ್ರತಿಕ್ರಿಯಿಸಿರುವ ಮಹಾನಗರ ಪಾಲಿಕೆ ಆಯುಕ್ತೆ ಬಿ. ಶುಭ ಅವರು, “ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿನ ಸಮಸ್ಯೆಯಿಂದಾಗಿ ಈ ಅಡಚಣೆ ಉಂಟಾಗಿದೆ. ಗುತ್ತಿಗೆದಾರರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಶನಿವಾರದಿಂದ ಕ್ಯಾಂಟೀನ್ ಪುನಾರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಅಡುಗೆ ಅನಿಲದ ಸಮಸ್ಯೆ ಮುಂದುವರಿದರೆ ಹೊರಗಡೆಯಿಂದ ಅಡುಗೆ ತಯಾರಿಸಿ ತಂದು ವಿತರಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

    ಆಟೋ ದರದಲ್ಲೂ ಏರಿಕೆ:
    ಇದೇ ವೇಳೆ ಸಿಎನ್‌ಜಿ ಇಂಧನ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಸರ್ವಿಸ್ ಆಟೋಗಳ ಪ್ರಯಾಣ ದರವನ್ನು ₹10 ರಷ್ಟು ಹೆಚ್ಚಿಸಲಾಗಿದೆ. ಈ ಮೊದಲು ₹20 ಇದ್ದ ಕನಿಷ್ಠ ದರ ಈಗ ₹30ಕ್ಕೆ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಹೊರೆಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ತುಮಕೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆದು ಸೂಕ್ತ ಸುರಕ್ಷತೆ…

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.