ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಇಂದು ಹೆಬ್ಬೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗಂಗೋನಹಳ್ಳಿ ಪಂಚಾಯಿತಿಯ ಕೆಂಬಳಲು ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ವೇಳೆ ಸಾರ್ವಜನಿಕರ ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ವೈರಸ್ ಬಗ್ಗೆ ಎಚ್ಚರದಿಂದಿರಲು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಹೆಬ್ಬೂರು ಜಿಲ್ಲಾ ಪಂಚಾಯತಿ ಜೆಡಿಎಸ್ ಮುಖಂಡರಾದ ಸೀರಾಕ್ ರವೀಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಕೋಡಿಮುದ್ದನಹಳ್ಳಿ ಪ್ರಕಾಶ್, ಪಾಂಡುರಂಗ ಹಾಗೂ ಅನೇಕ ಜೆಡಿಎಸ್ ಕಾರ್ಯಕರ್ತರುಗಳು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy