ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯಕ್ಕಾಗಿ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q