ಬೆಂಗಳೂರು: ಬಿಜೆಪಿ ನಾಯಕರ ಕುರಿತು ಸುಳ್ಳು ಮಾಹಿತಿ ಇರುವ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು, ಸಂಸದರು, ಶಾಸಕರ ವಿರುದ್ಧ ಪೋಸ್ಟ್ ಹಾಕಿದ ಆರೋಪದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು, ಸುಳ್ಳು ಬರಹದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಯೋಗೇಂದ್ರ ಹೊಡಾಘಟ್ಟ ಎಂಬುವರು ಪಿಸಿಆರ್ ದಾಖಲಿಸಿದ್ದರು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗ ನ್ಯಾಯಾಲಯವು ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.
ಡಿ.ಕೆ. ಶಿವಕುಮಾರ್ ಹಾಗೂ ಬಿ.ಆರ್. ನಾಯ್ಡು ಅವರ ವಿರುದ್ಧ ಕೇಸ್ ದಾಖಲಿಸಬೇಕು ಎಂಬುದಾಗಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶಿಸಿದೆ. ಕೋರ್ಟ್ ಆದೇಶದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 153(A), 504, 506 ಹಾಗೂ 464 ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


