ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ಯಾವುದೇ ವಿಚಾರದಲ್ಲಿ ಸಮಸ್ಯೆ ಇಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಸಚಿವರಾದ ಜಿ. ಪರಮೇಶ್ವರ ಮತ್ತು ಕೆ.ಎನ್. ರಾಜಣ್ಣ ಅವರು ಕಾರಣಾಂತರಗಳಿಂದ ಕೆಪಿಸಿಸಿ ಸರ್ವಸದಸ್ಯರ ಸಭೆಗೆ ಬಂದಿರಲಿಲ್ಲ ಎಂದರು.
ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ. ಶಿವಕುಮಾರ್ ಮತ್ತು ಸತೀಶ ಜಾರಕಿಹೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx