ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ೪೦ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯಕ್ಕೆ ಖುದ್ಧು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆ ವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.
ಇದೇ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ರೈತರು ಮತ್ತು ನಮ್ಮ ನೀರಿನ ಹಕ್ಕಿಗಾಗಿ ನಾವು ಹೋರಾಟ ಮಾಡಿದ್ದೇವು. ಕಾಂಗ್ರೆಸ್‌ನ ೪೦ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ನ್ಯಾಯಾಲಯ ವಿಚಾರಣೆಗೆ ಆದೇಶಿಸಿತ್ತು .ಅದರಂತೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದರು.
ಬಿಜೆಪಿ ನಾಯಕರುಗಳು ವಿಧಾನಸೌಧದಲ್ಲಿ, ಹೊರಗಡೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮೆರವಣಿಗೆಗಳನ್ನು ನಡೆಸಿದ್ದರು.ಆದರೆ ಅವರ ಮೇಲೆ ಪ್ರಕರಣ ದಾಖಲಿಸಿಲ್ಲ ಎಂದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


